ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಸುದ್ದಿಗಳು > ಉತ್ಥಾನ ವಾರ್ಷಿಕ ಕಥಾಸ್ಪರ್ಧೆ – 2020

ಉತ್ಥಾನ ವಾರ್ಷಿಕ ಕಥಾಸ್ಪರ್ಧೆ – 2020

ಮೊದಲನೆಯ ಬಹುಮಾನ ರೂ. 15,000
ಎರಡನೆಯ ಬಹುಮಾನ ರೂ. 12,000
ಮೂರನೆಯ ಬಹುಮಾನ ರೂ. 10,000
ಐದು ಮೆಚ್ಚುಗೆಯ ಬಹುಮಾನಗಳು ತಲಾ ರೂ. 2,000

ಕಥೆ ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು. ಎಲ್ಲೂ ಸ್ವೀಕೃತವಾಗಿರಬಾರದು; ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಕಟವಾಗಿರಬಾರದು.
ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು.

ಬಹುಮಾನಿತ ಕಥೆ ’ಉತ್ಥಾನ’ದಲ್ಲಿ ಪ್ರಕಟವಾಗುವವರೆಗೂ ಬೇರೆ ಎಲ್ಲೂ ಗ್ರಂಥರೂಪದಲ್ಲಾಗಲಿ, ಸಾಮಾಜಿಕ ಜಾಲತಾಣಗಳಲ್ಲಾಗಲಿ, ಪತ್ರಿಕೆ, ಆಕಾಶವಾಣಿ ಅಥವಾ ದೂರದರ್ಶನದಲ್ಲಾಗಲಿ ಪ್ರಕಟಣೆಗೆ, ಪ್ರಸಾರಕ್ಕೆ ಅವಕಾಶವಿಲ್ಲ.

ಕಾಗದದ ಒಂದೇ ಮಗ್ಗುಲಲ್ಲಿ ಸ್ಫುಟವಾಗಿ ಬರೆದಿರಬೇಕು ಅಥವಾ ವಿರಳವಾಗಿ ಬೆರಳಚ್ಚು ಮಾಡಿರಬೇಕು. ಕಾರ್ಬನ್/ಜೆರಾಕ್ಸ್ ಪ್ರತಿಗಳನ್ನು ಪರಿಶೀಲಿಸಲಾಗುವುದಿಲ್ಲ.

ಕಥೆಯನ್ನು ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ ಇ-ಮೇಲ್ ಮೂಲಕವೂ ಕಳುಹಿಸಬಹುದು. ಇ-ಮೇಲ್ ವಿಳಾಸ: [email protected] ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು.

ಹಸ್ತಪ್ರತಿಯನ್ನು ಹಿಂದಕ್ಕೆ ಕಳುಹಿಸುವ ಯಾವುದೇ ವ್ಯವಸ್ಥೆ ಇರುವುದಿಲ್ಲ. ಆದ್ದರಿಂದ ಲೇಖಕರು ಮೂಲಕಥೆಯ ಇನ್ನೊಂದು ಪ್ರತಿಯನ್ನು ತಮ್ಮ ಬಳಿ ಸುರಕ್ಷಿತವಾಗಿ ಇಟ್ಟುಕೊಳ್ಳುವುದು.
ಲೇಖಕರು ತಮ್ಮ ಹೆಸರು, ವಿಳಾಸ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜೊತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜೊತೆಗೆ ಲೇಖಕರ ಭಾವಚಿತ್ರವೂ ಇರಬೇಕು.

ಬಹುಮಾನಿತ ಕಥೆಗಳನ್ನು ಯಾವುದೇ ರೂಪದಲ್ಲಿ, ಯಾವಾಗ ಬೇಕಾದರೂ ಬಳಸುವ ಸಂಪೂರ್ಣ ಹಕ್ಕು ‘ಉತ್ಥಾನ’ದ್ದು.

ತೀರ್ಪುಗಾರರ ಮೌಲ್ಯನಿರ್ಣಯಾನಂತರ ಫಲಿತಾಂಶವನ್ನು ’ಉತ್ಥಾನ’ದಲ್ಲಿ ಪ್ರಕಟಿಸಲಾಗುವುದು. ವಿಜೇತರಿಗೆ ಮಾತ್ರ ಪತ್ರ ಬರೆದು ತಿಳಿಸಲಾಗುವುದು. ಅದಕ್ಕೆ ಪೂರ್ವದಲ್ಲಿ ಯಾವುದೇ ಪತ್ರವ್ಯವಹಾರ ಸಾಧ್ಯವಾಗದು.

ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ.

ಕಥೆಗಳು ತಲಪಲು ಕೊನೆಯ ದಿನಾಂಕ: ಅಕ್ಟೋಬರ್ ೩೧, ೨೦೨೦

ವಿಳಾಸ: ಸಂಪಾದಕರು, ’ಉತ್ಥಾನ’ ವಾರ್ಷಿಕ ಕಥಾಸ್ಪರ್ಧೆ – ೨೦೨೦
‘ಕೇಶವ ಶಿಲ್ಪ’, ಕೆಂಪೇಗೌಡನಗರ, ಬೆಂಗಳೂರು 560 019 ದೂರವಾಣಿ: 080 – 26604673

ನಿಮ್ಮ ಪ್ರತಿಕ್ರಿಯೆ ನೀಡಿ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ