ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-೨೦೨೩

ಬೆಂಗಳೂರು, ಸೆ. 6, 2023: ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ.

ಉತ್ಥಾನ ಮಾಸಪತ್ರಿಕೆಯು ಕಳೆದ ೫ ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ 2023೩ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ.

ಬಹುಮಾನಗಳು:

ಮೊದಲನೆಯ ಬಹುಮಾನ ರೂ. 15,000

ಎರಡನೆಯ ಬಹುಮಾನ ರೂ. 12,000

ಮೂರನೆಯ ಬಹುಮಾನ ರೂ. 10,000

ಐದು ಮೆಚ್ಚುಗೆಯ ಬಹುಮಾನಗಳು ತಲಾ ರೂ. 2,000

ನಿಯಮಗಳು:

  • ಕಥೆ ೩,೦೦೦ ಪದಗಳ ಮಿತಿಯಲ್ಲಿ ಇರಬೇಕು.

  • ಕಥೆಗಳು ಸ್ವತಂತ್ರವಾಗಿರಬೇಕು. ಬೇರೆಲ್ಲೂ ಪ್ರಕಟಣೆ ಅಥವಾ ಸ್ವೀಕೃತವಾಗಿರಬಾರದು.

  • ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು.

  • ಕಥೆಗಳು ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು. ಎಲ್ಲೂ ಸ್ವೀಕೃತವಾಗಿರಬಾರದು; ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಕಟವಾಗಿರಬಾರದು.

  • ಬಹುಮಾನಿತ ಕಥೆ ’ಉತ್ಥಾನ’ದಲ್ಲಿ ಪ್ರಕಟವಾಗುವವರೆಗೂ ಬೇರೆ ಎಲ್ಲೂ ಗ್ರಂಥರೂಪದಲ್ಲಾಗಲಿ, ಸಾಮಾಜಿಕ ಜಾಲತಾಣಗಳಲ್ಲಾಗಲಿ, ಪತ್ರಿಕೆ, ಆಕಾಶವಾಣಿ ಅಥವಾ ದೂರದರ್ಶನದಲ್ಲಾಗಲಿ ಪ್ರಕಟಣೆಗೆ, ಪ್ರಸಾರಕ್ಕೆ ಅವಕಾಶವಿಲ್ಲ.

  • ಕಾಗದದ ಒಂದೇ ಮಗ್ಗುಲಲ್ಲಿ ಸ್ಫುಟವಾಗಿ ಬರೆದಿರಬೇಕು ಅಥವಾ ವಿರಳವಾಗಿ ಬೆರಳಚ್ಚು ಮಾಡಿರಬೇಕು. ಕಾರ್ಬನ್/ಜೆರಾಕ್ಸ್ ಪ್ರತಿಗಳನ್ನು ಪರಿಶೀಲಿಸಲಾಗುವುದಿಲ್ಲ.

  • ಕಥೆಯನ್ನು ನುಡಿ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ (ವರ್ಡ್ ಮತ್ತು ಪಿಡಿಎಫ್ ೨ ರೂಪದಲ್ಲಿ) ಇ-ಮೇಲ್ ಮೂಲಕವೂ ಕಳುಹಿಸಬಹುದು. ಇ-ಮೇಲ್ ವಿಳಾಸ: utthanakathaspardhe@gmail.com

  • ಹಸ್ತಪ್ರತಿಯನ್ನು ಹಿಂದಕ್ಕೆ ಕಳುಹಿಸುವ ಯಾವುದೇ ವ್ಯವಸ್ಥೆ ಇರುವುದಿಲ್ಲ. ಆದ್ದರಿಂದ ಲೇಖಕರು ಮೂಲಕಥೆಯ ಇನ್ನೊಂದು ಪ್ರತಿಯನ್ನು ತಮ್ಮ ಬಳಿ ಸುರಕ್ಷಿತವಾಗಿ ಇಟ್ಟುಕೊಳ್ಳುವುದು.

  • ಲೇಖಕರು ತಮ್ಮ ಹೆಸರು, ವಿಳಾಸ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜೊತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜೊತೆಗೆ ಲೇಖಕರ ಭಾವಚಿತ್ರವೂ ಇರಬೇಕು.

  • ಬಹುಮಾನಿತ ಕಥೆಗಳನ್ನು ಯಾವುದೇ ರೂಪದಲ್ಲಿ, ಯಾವಾಗ ಬೇಕಾದರೂ ಬಳಸುವ ಸಂಪೂರ್ಣ ಹಕ್ಕು ’ಉತ್ಥಾನ’ದ್ದು.

  • ತೀರ್ಪುಗಾರರ ಮೌಲ್ಯನಿರ್ಣಯಾನಂತರ ಫಲಿತಾಂಶವನ್ನು ’ಉತ್ಥಾನ’ದಲ್ಲಿ ಪ್ರಕಟಿಸಲಾಗುವುದು. ವಿಜೇತರಿಗೆ ಮಾತ್ರ ಪತ್ರ ಬರೆದು ತಿಳಿಸಲಾಗುವುದು. ಅದಕ್ಕೆ ಪೂರ್ವದಲ್ಲಿ ಯಾವುದೇ ಪತ್ರವ್ಯವಹಾರ ಸಾಧ್ಯವಾಗದು.

  • ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ.

ಕಥೆಗಳು ತಲಪಲು ಕೊನೆಯ ದಿನಾಂಕ: ಅಕ್ಟೋಬರ್ 10, 2023

ವಿಳಾಸ: ಸಂಪಾದಕರು, ’ಉತ್ಥಾನ’ ವಾರ್ಷಿಕ ಕಥಾ ಸ್ಪರ್ಧೆ – 2023, ’ಕೇಶವ ಶಿಲ್ಪ’, ಕೆಂಪೇಗೌಡನಗರ, ಬೆಂಗಳೂರು 560 004

 ದೂರವಾಣಿ: 77954 41894 / 080-2660 4673  ಇ-ಮೇಲ್: uutthanakathaspardhe@gmail.com

Facebook
X
WhatsApp
Print
Email