ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-2024

ಬೆಂಗಳೂರು, ಜುಲೈ 30, 2024: ಉತ್ಥಾನ ಮಾಸಪತ್ರಿಕೆಯು ಕಳೆದ 5 ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದ್ದು, ಈ ಬಾರಿಯ 2024ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ. ಕಥೆಯು 3,000 ಪದಮಿತಿಯಲ್ಲಿ ಇರಬೇಕು. ಮತ್ತು ಕಥೆಗಳು ಸ್ವತಂತ್ರವಾಗಿರಬೇಕು. ಬೇರೆಲ್ಲೂ ಪ್ರಕಟಣೆ ಅಥವಾ ಸ್ವೀಕೃತವಾಗಿರಬಾರದು. ಕಥೆ ತಲುಪಲು ಕೊನೆಯ ದಿನಾಂಕ: ಅಕ್ಟೋಬರ್ 10, 2024

ಬಹುಮಾನಗಳು:

  • ಮೊದಲನೆಯ ಬಹುಮಾನ ರೂ. 15,000
  • ಎರಡನೆಯ ಬಹುಮಾನ ರೂ. 12,000
  • ಮೂರನೆಯ ಬಹುಮಾನ ರೂ. 10,000
  • ಐದು ಮೆಚ್ಚುಗೆಯ ಬಹುಮಾನಗಳು ತಲಾ ರೂ. 2,000

ಕಥಾ ಸ್ಪರ್ಧೆಯ ನಿಯಮಗಳು:

  • ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು. 
  • ಕಥೆಗಳು ಸ್ವತಂತ್ರವಾಗಿರಬೇಕು. ಬೇರೆಲ್ಲೂ ಪ್ರಕಟಣೆ ಅಥವಾ ಸ್ವೀಕೃತವಾಗಿರಬಾರದು.
  • ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು.
  • ಕಥೆಯನ್ನು ಪೋಸ್ಟ್ ಮೂಲಕ ಅಥವಾ ನುಡಿ/ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ ಇ-ಮೇಲ್ ಮೂಲಕವೂ ಕಳುಹಿಸಬಹುದು. ಇ-ಮೇಲ್ ವಿಳಾಸ:  utthanakathaspardhe@gmail.com
  • ಲೇಖಕರು ತಮ್ಮ ಹೆಸರು, ವಿಳಾಸ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜೊತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜೊತೆಗೆ ಲೇಖಕರ ಭಾವಚಿತ್ರವೂ ಇರಬೇಕು.
  • ತೀರ್ಪುಗಾರರ ಮೌಲ್ಯನಿರ್ಣಯಾನಂತರ ಫಲಿತಾಂಶವನ್ನು ’ಉತ್ಥಾನ’ದಲ್ಲಿ ಪ್ರಕಟಿಸಲಾಗುವುದು. ವಿಜೇತರಿಗೆ ಮಾತ್ರ ಪತ್ರ ಬರೆದು ತಿಳಿಸಲಾಗುವುದು. ಅದಕ್ಕೆ ಪೂರ್ವದಲ್ಲಿ ಯಾವುದೇ ಪತ್ರವ್ಯವಹಾರ ಸಾಧ್ಯವಾಗದು.
  • ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ.

ಕಥೆಗಳು ತಲುಪಲು ಕೊನೆಯ ದಿನಾಂಕ: ಅಕ್ಟೋಬರ್ 10, 2024

ವಿಳಾಸ: ಸಂಪಾದಕರು, ’ಉತ್ಥಾನ’ ವಾರ್ಷಿಕ ಕಥಾ ಸ್ಪರ್ಧೆ – 2024, ’ಕೇಶವ ಶಿಲ್ಪ’, ಕೆಂಪೇಗೌಡನಗರ, ಬೆಂಗಳೂರು- 560 004 ದೂರವಾಣಿ: 77954 41894 ಇ-ಮೇಲ್:   utthanakathaspardhe@gmail.com

ಕಥೆಗಳು ತಲುಪಲು ಕೊನೆಯ ದಿನಾಂಕ: ಅಕ್ಟೋಬರ್ 10, 2024

Facebook
X
WhatsApp
Print
Email