
ಸಕ್ಕರೆ ಕಾಯಿಲೆ ಅಥವಾ ಮಧುಮೇಹ ರೋಗ ಎನ್ನುವುದು ಬಹಳ ಪುರಾತನವಾದ ಕಾಯಿಲೆ. ಪ್ರಾಚೀನ ಭಾರತೀಯ ಚರಕಸಂಹಿತೆ, ಸುಶ್ರುತಸಂಹಿತೆಗಳಲ್ಲಿ ಈ ರೋಗದ ಸ್ಥಿತಿಯನ್ನು ಮಧುಮೇಹ ರೋಗ ಮತ್ತು ಸಿಹಿಮೂತ್ರ ರೋಗ ಎಂದು ಉಲ್ಲೇಖಿಸಲಾಗಿದೆ. (ಇರುವೆಗಳನ್ನು ಆಕರ್ಷಿಸುವ ಮೂತ್ರ) ಡಯಾಬಿಟಿಸ್ ಎಂಬ ಶಬ್ದವನ್ನು ಕ್ರಿ.ಶ. ೨ನೇ ಶತಮಾನದಲ್ಲಿ ಗ್ರೀಸ್ನ ಅರಿಯೇಟಸ್ ಎಂಬ ವೈದ್ಯನು ನೀಡಿದ. ಕ್ರಿ.ಶ. ೧೬೦೦ರಲ್ಲಿ ಥೋಮಸ್ ವಿಲ್ಸನ್ ಎಂಬಾತ ಡಯಾಬಿಟಿಸ್ ಇನ್ಸಿಪಿಡಸ್ (ಅತಿಯಾದ ಮೂತ್ರ) ಮತ್ತು ಡಯಾಬಿಟಿಸ್ ಮೆಲಿಟಸ್ (ಸಿಹಿಮೂತ್ರ) ಎಂದು ಎರಡು ಪ್ರತ್ಯೇಕ ರೋಗಗಳೆಂದು ಹೇಳಿದನು. […]