ಬೆಂಗಳೂರು, ಜೂನ್ 14: ರಾಷ್ಟ್ರೋತ್ಥಾನ ಪರಿಷತ್ ಅಂತಾರಾಷ್ಟ್ರೀಯ ಯೋಗದಿನಾಚರಣೆಯ ಪ್ರಯುಕ್ತ ಜೂನ್ 15ರಿಂದ 20ರ ತನಕ ಅಂತರ್ಜಾಲ ಉಪನ್ಯಾಸ ಸರಣಿಯನ್ನು ಆಯೋಜಿಸಿದೆ ಎಂದು ರಾಷ್ಟ್ರೋತ್ಥಾನ ಯೋಗ ವಿಭಾಗದ ನಿರ್ದೇಶಕರಾದ ಎ. ನಾಗೇಂದ್ರ ಕಾಮತ್ ಅವರು ತಿಳಿಸಿದರು. ಅಂತಾರಾಷ್ಟ್ರೀಯ ಯೋಗ ದಿನವನ್ನು ರಾಷ್ಟ್ರೋತ್ಥಾನ ಯೋಗವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ವತಿಯಿಂದ ಪ್ರತಿ ವರ್ಷ ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದೆ. ಈ ವರ್ಷ ಕೊರೋನಾ ಕಾರಣದಿಂದ ಆನ್‌ಲೈನ್ ಮೂಲಕ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿಯ 7ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆಯ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ […]











