
ಬೆಂಗಳೂರು, ಆಗಸ್ಟ್ ೩೦, ೨೦೨೧: ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ. ಕಥಾ ಸ್ಪರ್ಧೆಯು ಕನ್ನಡದಲ್ಲಿ ಇರುತ್ತದೆ. ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಕಥೆಗಳು ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು. ಎಲ್ಲೂ ಸ್ವೀಕೃತವಾಗಿರಬಾರದು; ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಕಟವಾಗಿರಬಾರದು. ಕಾಗದದ ಒಂದೇ ಮಗ್ಗುಲಲ್ಲಿ ಸ್ಫುಟವಾಗಿ ಬರೆದು ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಅಥವಾ ನುಡಿ, ಬರಹ, ಯೂನಿಕೋಡ್ […]