
ಹಿರಿಯರಾದ ಶ್ರೀ ಕುಮಾರನಿಜಗುಣ ಸ್ವಾಮಿಗಳು ಇತ್ತೀಚೆಗೆ ಇಹಲೋಕವನ್ನು ತ್ಯಜಿಸಿದ್ದಾರೆ. ಇದು ಅವರು ಬಯಸಿದ ಕೈವಲ್ಯವೋ ಮೋಕ್ಷವೋ ಅಲ್ಲವೋ ತಿಳಿಯುವ ಯೋಗ್ಯತೆ ನಮಗಿಲ್ಲ. ಸಂನ್ಯಾಸಿಗಳು ಪಂಚತ್ವವನ್ನೆಂದಿದಾಗ ಶೋಕಿಸಬಾರದೆಂಬ ಮಾತೂ ಇದೆ. ಆದರೆ ನಿತ್ಯಸಂಸಾರಿಗಳಾದ ನಮಗೆ ಅದರ ಗೊಡವೆಯೇಕೆ! ನಮ್ಮ ದುಃಖ ನಮ್ಮದು. ಕುಮಾರನಿಜಗುಣರ ಬಗೆಗೆ ಹೆಚ್ಚು ಜನಕ್ಕೆ ತಿಳಿದಿರಲಾರದು – ಅವರು ಸಾಹಿತ್ಯಲೋಕದ, ವಿದ್ವಲ್ಲೋಕದ ಧ್ರುವತಾರೆಯಾಗಿ ತೊಳಗಲಿಲ್ಲ, ಸೂರ್ಯನಾಗಿ ಬೆಳಗಲಿಲ್ಲ – ಹಾಗೆ ತೊಳಗಿ ಬೆಳಗಲು ಬೇಕಾದ ವಿದ್ವತ್ತೆಯೂ, ಅದನ್ನು ಮಿಂಚಿದ ಪ್ರತಿಭೆಯೂ ಅವರ ಬಳಿ ಬೇಕಾದಷ್ಟಿತ್ತೆಂಬುದನ್ನು ಅವರನ್ನು […]