ಬೆಂಗಳೂರು, ಆಗಸ್ಟ್ 23, 2021: ಉತ್ಥಾನ ಮಾಸಪತ್ರಿಕೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ’ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ನಡೆದ ಪ್ರಬಂಧ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ|| ಕೆ.ಆರ್. ವೇಣುಗೋಪಾಲ್, ನೃಪತುಂಗ ವಿಶ್ವವಿದ್ಯಾಲಯದ ಕುಲಪತಿ ಡಾ|| ಶ್ರೀನಿವಾಸ ಬಳ್ಳಿ, ರಾಜೀವ್‌ಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಡಾ|| ಜಯಕರ ಶೆಟ್ಟಿ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ. ನರಸಿಂಹಮೂರ್ತಿ, ಬೆಸ್ಟೀ ವಿಶ್ವವಿದ್ಯಾಲಯದ ಕುಲಪತಿ ಡಾ|| ರೂಪಾ ವಾಸುದೇವನ್, ಬಿ.ಎಂ.ಎಸ್. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪರೀಕ್ಷಾ ಕುಲಪತಿ ಡಾ|| ಮಂಜುನಾಥ ಭಟ್, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ|| ರವಿಶಂಕರ್, ದಯಾನಂದ ಸಾಗರ್ ದಂತವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ|| ಹೇಮಂತ್ ಸೇರಿದಂತೆ ಶಿಕ್ಷಣ ತಜ್ಞರು, ಶೈಕ್ಷಣಿಕ ಸಂಸ್ಥೆಗಳ ಮುಖಂಡರು, ರಾಷ್ಟ್ರೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ದಿನೇಶ್ ಹೆಗ್ಡೆ ಪಾಲ್ಗೊಂಡಿದ್ದರು.